Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:12 - ಪರಿಶುದ್ದ ಬೈಬಲ್‌

12 ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:12
13 ತಿಳಿವುಗಳ ಹೋಲಿಕೆ  

ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


“ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.


“ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಈ ಭಾಗವು ನಿನಗೆ ಸಲ್ಲತಕ್ಕ ಪಾಲು.


“ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)


“ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.


“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು