ಯಾಜಕಕಾಂಡ 14:13 - ಪರಿಶುದ್ದ ಬೈಬಲ್13 ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.