Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:18 - ಪರಿಶುದ್ದ ಬೈಬಲ್‌

18 ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯಿದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:18
13 ತಿಳಿವುಗಳ ಹೋಲಿಕೆ  

ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.


ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು.


ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು