ಯಾಜಕಕಾಂಡ 14:21 - ಪರಿಶುದ್ದ ಬೈಬಲ್21 “ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಅಷ್ಟನ್ನು ಸಮರ್ಪಿಸುವದಕ್ಕೆ ಬಡವನಾಗಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರಮಾಡಿಸಿಕೊಳ್ಳುವದಕ್ಕೋಸ್ಕರ [ಯಾಜಕನ ಕೈಯಿಂದ] ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಮೂರು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ಅಧ್ಯಾಯವನ್ನು ನೋಡಿ |