Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:36 - ಪರಿಶುದ್ದ ಬೈಬಲ್‌

36 “ಆಗ ಯಾಜಕನು ಬೂಷ್ಟನ್ನು ನೋಡಲು ಮನೆಯ ಒಳಗೆ ಹೋಗುವುದಕ್ಕಿಂತ ಮೊದಲು ಆ ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಜನರಿಗೆ ಆಜ್ಞಾಪಿಸಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರುವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದ ನಂತರ ಯಾಜಕನು ಮನೆಯೊಳಗೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮುಂಚೆ ಆ ಮನೆಯನ್ನು ಬರಿದು ಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದು ಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುವುವು. ಬರಿದು ಮಾಡಿದ ಮೇಲೆ ಯಾಜಕನು ಆ ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವದಕ್ಕೆ ಮುಂಚೆ ಆ ಮನೆಯನ್ನು ಬರಿದುಮಾಡಲಾಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾದಾವು. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಯಾಜಕನು ಆ ಮನೆಯಲ್ಲಿ ಬೂಜನ್ನು ಪರೀಕ್ಷಿಸುವುದಕ್ಕೆ ಹೋಗುವ ಮೊದಲು, ಆ ಮನೆಯೊಳಗೆ ಇರುವವುಗಳು ಅಶುದ್ಧವಾಗದಂತೆ ಆ ಮನೆಯನ್ನು ಬರಿದುಮಾಡಬೇಕೆಂದು ಆಜ್ಞಾಪಿಸಬೇಕು. ತರುವಾಯ ಯಾಜಕನು ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:36
7 ತಿಳಿವುಗಳ ಹೋಲಿಕೆ  

ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ಆ ಮನೆಯ ಯಾಜಮಾನನು ಬಂದು, ‘ನನ್ನ ಮನೆಯಲ್ಲಿ ಬೂಷ್ಟು ಬಂದಿದೆ’ ಎಂದು ಯಾಜಕನಿಗೆ ಹೇಳಬೇಕು.


ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು ಅದು ಹಸಿರು ಅಥವಾ ಕೆಂಪು ಬಣ್ಣದ್ದಾಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ,


ಮತ್ತು ಮುಚ್ಚಳವಿಲ್ಲದಿರುವ ಪ್ರತಿಯೊಂದು ಪಾತ್ರೆಯೂ ಅಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು