43 “ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.
“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.
“ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.