Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:48 - ಪರಿಶುದ್ದ ಬೈಬಲ್‌

48 “ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 “ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:48
10 ತಿಳಿವುಗಳ ಹೋಲಿಕೆ  

ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.


ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.


ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.


“ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,


ಯಾವನಾದರೂ ಆ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.


“ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರು ಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು