Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:5 - ಪರಿಶುದ್ದ ಬೈಬಲ್‌

5 ಬಳಿಕ ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಅಪ್ಪಣೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪಕ್ಷಿಗಳಲ್ಲಿ ಒಂದನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ, ಮತ್ತೊಂದು ಪಕ್ಷಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಪಕ್ಷಿಗಳಲ್ಲಿ ಒಂದನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:5
8 ತಿಳಿವುಗಳ ಹೋಲಿಕೆ  

ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ಯಾಜಕನು ಒಂದು ಪಕ್ಷಿಯನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಬಟ್ಟಲಲ್ಲಿ ವಧಿಸಬೇಕು.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.


ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.


ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು