Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:52 - ಪರಿಶುದ್ದ ಬೈಬಲ್‌

52 ಮನೆಯನ್ನು ಶುದ್ಧೀಕರಿಸುವುದಕ್ಕೆ ಯಾಜಕನು ಅವುಗಳನ್ನು ಆ ರೀತಿಯಲ್ಲಿ ಉಪಯೋಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಹಾಗೆ ಆ ಪಕ್ಷಿಯ ರಕ್ತ, ಒರತೆ ನೀರು, ಸಜೀವಪಕ್ಷಿ, ದೇವದಾರಿನ ಆ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅವನು ಪಕ್ಷಿಯ ರಕ್ತದಿಂದಲೂ, ಹರಿಯುವ ನೀರಿನಿಂದಲೂ, ಸಜೀವವುಳ್ಳ ಪಕ್ಷಿಯಿಂದಲೂ, ದೇವದಾರು ಕಟ್ಟಿಗೆಯಿಂದಲೂ, ಹಿಸ್ಸೋಪಿನಿಂದಲೂ, ರಕ್ತವರ್ಣ ದಾರದಿಂದಲೂ ಆ ಮನೆಯನ್ನು ಶುದ್ಧೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:52
3 ತಿಳಿವುಗಳ ಹೋಲಿಕೆ  

ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.


ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.


ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಆ ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಆ ಮನೆಯು ಶುದ್ಧವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು