Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:7 - ಪರಿಶುದ್ದ ಬೈಬಲ್‌

7 ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿವಿುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:7
29 ತಿಳಿವುಗಳ ಹೋಲಿಕೆ  

ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”


ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.


ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.


ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.


ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.


ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.


ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.


ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.


ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.


ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು.


ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.


ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು