ಯಾಜಕಕಾಂಡ 14:9 - ಪರಿಶುದ್ದ ಬೈಬಲ್9 ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನಮಾಡಬೇಕು. ಆಗಿನಿಂದ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |