Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:14 - ಪರಿಶುದ್ದ ಬೈಬಲ್‌

14 ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:14
11 ತಿಳಿವುಗಳ ಹೋಲಿಕೆ  

ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.


ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.


“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.


“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು