ಯಾಜಕಕಾಂಡ 15:15 - ಪರಿಶುದ್ದ ಬೈಬಲ್15 ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗೋಸ್ಕರ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |
ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.”