Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:16 - ಪರಿಶುದ್ದ ಬೈಬಲ್‌

16 “ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:16
9 ತಿಳಿವುಗಳ ಹೋಲಿಕೆ  

“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,


ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


“ಪಾಳೆಯದ ಹೊರಗೆ ಬಹಿರ್ದೇಶಕ್ಕೆ ಹೋಗಲು ಒಂದು ಸ್ಥಳವನ್ನು ನೇಮಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು