Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:18 - ಪರಿಶುದ್ದ ಬೈಬಲ್‌

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:18
15 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.


ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.


ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.


“ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.


ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು