Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:2 - ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳಿರಿ: ಒಬ್ಬನ ದೇಹದಿಂದ ಸ್ರಾವವಾದಾಗ ಆ ವ್ಯಕ್ತಿ ಅಶುದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ಒಬ್ಬನ ರಹಸ್ಯಾಂಗದಲ್ಲಿ ಮೇಹಸ್ರಾವವಾದರೆ ಅದರ ದೆಸೆಯಿಂದ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:2
15 ತಿಳಿವುಗಳ ಹೋಲಿಕೆ  

ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


“ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,


ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.


ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.


ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.


ಆ ಜನರ ನಡುವೆ ಒಬ್ಬ ಸ್ತ್ರೀ ಇದ್ದಳು. ಆಕೆಗೆ ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿತ್ತು.


ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:


ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.


“ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು