ಯಾಜಕಕಾಂಡ 15:25 - ಪರಿಶುದ್ದ ಬೈಬಲ್25 “ಸ್ತ್ರೀಗೆ ತನ್ನ ಮುಟ್ಟಿನ ದಿನಗಳ ಹೊರತಾಗಿ ಅನೇಕ ದಿನಗಳವರೆಗೆ ರಕ್ತಸ್ರಾವವಾದರೆ ಅಥವಾ ಮುಟ್ಟಿನ ದಿನಗಳ ನಂತರ ಅವಳಿಗೆ ಸ್ರಾವವಾದರೆ, ಆಕೆಯು ತನ್ನ ಮುಟ್ಟಿನ ದಿನಗಳಲ್ಲಿ ಅಶುದ್ಧಳಾಗಿರುವಂತೆ, ಅಶುದ್ಧಳಾಗಿರುವಳು. ಅವಳಿಗೆ ಸ್ರಾವವಾಗುವ ದಿನಗಳೆಲ್ಲಾ ಅವಳು ಅಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲದಲ್ಲಿ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ದಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ ಇಲ್ಲವೆ ಮುಟ್ಟಿನ ಕಾಲಕ್ಕೆ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿ |