Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:5 - ಪರಿಶುದ್ದ ಬೈಬಲ್‌

5 ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:5
31 ತಿಳಿವುಗಳ ಹೋಲಿಕೆ  

ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.


“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.


“ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ದೇವರು ಹೇಳಿದ್ದೇನೆಂದರೆ, “ಅದೇ ಸಮಯದಲ್ಲಿ ನೀನು ಅಶುದ್ಧರಾಗದ ಹಾಗೇ ನಾನು ನೋಡಿಕೊಳ್ಳುವೆನು. ಬೀಜ ಬೆಳೆಯಲು ನಾನು ಆಜ್ಞಾಪಿಸುವೆನು. ನಿಮಗೆ ಹಸಿವೆಯಾಗಲು ಬಿಡುವದಿಲ್ಲ.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”


“ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.


ಬಳಿಕ ಅವುಗಳನ್ನು ಸುಡುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ತನ್ನ ಪೂರ್ಣದೇಹವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


ತನ್ನ ಎಡಗೈಯಲ್ಲಿರುವ ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ಏಳುಸಲ ತನ್ನ ಬಲಗೈಯ ಬೆರಳಿನಿಂದ ಚಿಮಿಕಿಸುವನು.


ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.


ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.


“ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.


ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


“ಸ್ರಾವವಾಗುತ್ತಿರುವ ವ್ಯಕ್ತಿ ಯಾವ ಹಾಸಿಗೆಯ ಮೇಲೆ ಮಲಗಿದರೂ ಆ ಹಾಸಿಗೆ ಅಶುದ್ಧವಾಗುತ್ತದೆ.


ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.


ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು