ಯಾಜಕಕಾಂಡ 16:12 - ಪರಿಶುದ್ದ ಬೈಬಲ್12 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು. ಅಧ್ಯಾಯವನ್ನು ನೋಡಿ |