ಯಾಜಕಕಾಂಡ 16:13 - ಪರಿಶುದ್ದ ಬೈಬಲ್13 ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು. ಅಧ್ಯಾಯವನ್ನು ನೋಡಿ |
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”