ಯಾಜಕಕಾಂಡ 16:16 - ಪರಿಶುದ್ದ ಬೈಬಲ್16 ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು. ಅಧ್ಯಾಯವನ್ನು ನೋಡಿ |