Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:17 - ಪರಿಶುದ್ದ ಬೈಬಲ್‌

17 “ಆರೋನನು ಮಹಾ ಪವಿತ್ರಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡಲು ದೇವದರ್ಶನಗುಡಾರದೊಳಗೆ ಹೋದ ಸಮಯದಿಂದ ಅವನು ಬರುವ ತನಕ ಗುಡಾರದೊಳಗೆ ಯಾರೂ ಇರಕೂಡದು. ಆರೋನನು ಬರುವ ತನಕ ಯಾರೂ ಒಳಗೆ ಹೋಗಕೂಡದು. ಹೀಗೆ ಆರೋನನು ತನಗಾಗಿಯೂ ತನ್ನ ಕುಟುಂಬಕ್ಕಾಗಿಯೂ ಇಡೀ ಇಸ್ರೇಲ್ ಸಮೂಹಕ್ಕಾಗಿಯೂ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ದೋಷಪರಿಹಾರಮಾಡುವದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಕೂಡದು. ಹಾಗೆ ತನಗೋಸ್ಕರವಾಗಿಯೂ ತನ್ನ ಮನೆತನದವರಿಗೋಸ್ಕರವಾಗಿಯೂ ಇಸ್ರಾಯೇಲ್ಯರ ಎಲ್ಲಾ ಜನಸಮೂಹಕ್ಕೋಸ್ಕರವಾಗಿಯೂ ದೋಷಪರಿಹಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಮಹಾಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ, ತನ್ನ ಮನೆಯವರಿಗೆಲ್ಲರಿಗೋಸ್ಕರವೂ, ಇಸ್ರಾಯೇಲರ ಸಭೆಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಿ ಹೊರಗೆ ಬರುವ ತನಕ ದೇವದರ್ಶನದ ಗುಡಾರದಲ್ಲಿ ಒಬ್ಬ ಮನುಷ್ಯನೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:17
14 ತಿಳಿವುಗಳ ಹೋಲಿಕೆ  

ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.


ಸಮುವೇಲನು ಎಲ್ಕಾನನ ಮಗ. ಎಲ್ಕಾನನು ಯೆರೋಹಾಮನ ಮಗ. ಯೆರೋಹಾಮನು ಎಲೀಯೇಲನ ಮಗ. ಎಲೀಯೇಲನು ತೋಹನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು