ಯಾಜಕಕಾಂಡ 16:2 - ಪರಿಶುದ್ದ ಬೈಬಲ್2 ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”