ಯಾಜಕಕಾಂಡ 16:21 - ಪರಿಶುದ್ದ ಬೈಬಲ್21 ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಾಯೇಲ್ಯರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ ಅಪರಾಧಗಳನ್ನೂ ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು. ಅಧ್ಯಾಯವನ್ನು ನೋಡಿ |