Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:23 - ಪರಿಶುದ್ದ ಬೈಬಲ್‌

23 “ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟುಬಿಟ್ಟು ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:23
8 ತಿಳಿವುಗಳ ಹೋಲಿಕೆ  

ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.


ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು