ಯಾಜಕಕಾಂಡ 16:24 - ಪರಿಶುದ್ದ ಬೈಬಲ್24 ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನ್ನ ಹಾಗು ಜನಸಮೂಹದ ಪರವಾಗಿ ದಹನಬಲಿಗಳನ್ನು ಸಮರ್ಪಿಸಿ ತನ್ನ ಮತ್ತು ಜನರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿ |