Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:25 - ಪರಿಶುದ್ದ ಬೈಬಲ್‌

25 ಬಳಿಕ ಅವನು ಪಾಪಪರಿಹಾರಕ ಯಜ್ಞದ ಕೊಬ್ಬನ್ನು ವೇದಿಕೆಯ ಮೇಲೆ ಹೋಮಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ದೋಷಪರಿಹಾರಕ ಬಲಿಪ್ರಾಣಿಗಳ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ದೋಷಪರಿಹಾರಕಯಜ್ಞ ಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪಾಪ ಪರಿಹಾರದ ಬಲಿಯ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:25
7 ತಿಳಿವುಗಳ ಹೋಲಿಕೆ  

ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.


ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.


ತರುವಾಯ ಯಾಜಕನು ಪಶುವಿನಿಂದ ಕೊಬ್ಬನ್ನೆಲ್ಲಾ ತೆಗೆದು ಅದನ್ನು ವೇದಿಕೆಯ ಮೇಲೆ ಹೋಮಮಾಡಬೇಕು.


ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.


“ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು