ಯಾಜಕಕಾಂಡ 16:27 - ಪರಿಶುದ್ದ ಬೈಬಲ್27 “ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು. ಅಧ್ಯಾಯವನ್ನು ನೋಡಿ |