Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:31 - ಪರಿಶುದ್ದ ಬೈಬಲ್‌

31 ಈ ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ಈ ನಿಯಮ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದು ನಿಮಗೆ ಪೂರ್ತಿ ದುಡಿಮೆ ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಿರಬೇಕು; ನಿಮಗಿದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದು ನಿಮಗೆ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಾಗಿರಬೇಕು; ಇದೇ ನಿಮಗೆ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದೇ ನಿಮಗೆ ಸಬ್ಬತ್ ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:31
8 ತಿಳಿವುಗಳ ಹೋಲಿಕೆ  

ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.”


ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?


ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.


ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.


“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು