Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:33 - ಪರಿಶುದ್ದ ಬೈಬಲ್‌

33 ಅವನು ಮಹಾ ಪವಿತ್ರಸ್ಥಳ, ದೇವದರ್ಶನಗುಡಾರ ಮತ್ತು ವೇದಿಕೆಯನ್ನು ಶುದ್ಧೀಕರಿಸಬೇಕು; ಅವನು ಯಾಜಕರನ್ನು ಇಸ್ರೇಲರನ್ನು ಶುದ್ಧೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಬಲಿಪೀಠ, ಯಾಜಕರು, ಜನಸಮೂಹದವರು ಈ ಎಲ್ಲರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:33
8 ತಿಳಿವುಗಳ ಹೋಲಿಕೆ  

ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.


ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.


“ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು.


ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು