ಯಾಜಕಕಾಂಡ 16:34 - ಪರಿಶುದ್ದ ಬೈಬಲ್34 ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!