ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.
ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.
“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.