ಯಾಜಕಕಾಂಡ 16:6 - ಪರಿಶುದ್ದ ಬೈಬಲ್6 ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆರೋನನು ತನಗಾಗಿ ತಂದ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪಶ್ಚಾತ್ತಾಪ ವಿಧಿಯನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆರೋನನು ತನಗೋಸ್ಕರವಾಗಿ ತಂದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿ |
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.