Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:9 - ಪರಿಶುದ್ದ ಬೈಬಲ್‌

9 “ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾವ ಹೋತ ಸರ್ವೇಶ್ವರನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಬಲಿಗಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾವ ಹೋತ ಯೆಹೋವನದೆಂದು ಗೊತ್ತಾಗುವದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞರೂಪವಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:9
4 ತಿಳಿವುಗಳ ಹೋಲಿಕೆ  

ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು.


ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು