Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:10 - ಪರಿಶುದ್ದ ಬೈಬಲ್‌

10 “ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:10
25 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.


ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


“ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.


ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.


ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


“ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.


“ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?


ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು.


“ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.


ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು