Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:12 - ಪರಿಶುದ್ದ ಬೈಬಲ್‌

12 ಆದ್ದರಿಂದ ನಾನು ಇಸ್ರೇಲರಿಗೆ ಹೇಳುವುದೇನೆಂದರೆ: ನಿಮ್ಮಲ್ಲಿ ಯಾವನೂ ರಕ್ತಭೋಜನ ಮಾಡಬಾರದು ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಯಾವ ಪರದೇಶಸ್ಥನೂ ರಕ್ತಭೋಜನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದದರಿಂದ - ನಿಮ್ಮಲ್ಲಿಯಾಗಲಿ ನಿಮ್ಮ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:12
5 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.


ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


“ಯಾವನಾದರೂ ಒಂದು ಪ್ರಾಣಿಯನ್ನು ಬೇಟೆಯಾಡಿದರೆ ಅಥವಾ ಪಕ್ಷಿಯನ್ನು ಹಿಡಿದರೆ, ಅವನು ಅದರ ರಕ್ತವನ್ನು ನೆಲದ ಮೇಲೆ ಸುರಿದು ಅದನ್ನು ಮಣ್ಣಿನಿಂದ ಮುಚ್ಚಿಬಿಡಬೇಕು. ಅವನು ಇಸ್ರೇಲನಾದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾದರೂ ಹಾಗೆಯೇ ಮಾಡಬೇಕು.


“ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು