Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:15 - ಪರಿಶುದ್ದ ಬೈಬಲ್‌

15 “ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಾನಾಗಿ ಸತ್ತು ಬಿದ್ದದ್ದನ್ನಾಗಲಿ ಕಾಡುಮೃಗಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾದರೂ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:15
22 ತಿಳಿವುಗಳ ಹೋಲಿಕೆ  

“ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.


“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!


“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.


ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.


ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಆದ್ದರಿಂದ ಯಾವನಾದರೂ ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡುಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು.


ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.


ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.


ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


“ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.


“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು