Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:5 - ಪರಿಶುದ್ದ ಬೈಬಲ್‌

5 ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:5
20 ತಿಳಿವುಗಳ ಹೋಲಿಕೆ  

ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತಸ್ಥಳಗಳಲ್ಲಿ ಧೂಪಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.


ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು.


ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.


ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.


ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರಗಳ ಕೆಳಗೂ ಇರುತ್ತವೆ.


ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.


ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.


ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.


ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು