ಯಾಜಕಕಾಂಡ 17:7 - ಪರಿಶುದ್ದ ಬೈಬಲ್7 ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’ ಅಧ್ಯಾಯವನ್ನು ನೋಡಿ |
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.