ಯಾಜಕಕಾಂಡ 18:25 - ಪರಿಶುದ್ದ ಬೈಬಲ್25 ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗೆ ಅವರ ನಾಡು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ. ಆ ನಾಡು ತನ್ನಲ್ಲಿ ವಾಸಿಸಿದವರನ್ನು ಕಕ್ಕಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು. ಅಧ್ಯಾಯವನ್ನು ನೋಡಿ |
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”