ಯಾಜಕಕಾಂಡ 18:26 - ಪರಿಶುದ್ದ ಬೈಬಲ್26 “ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯಜನರಿಗಾಗಿ ಇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಿಸುವ ಅನ್ಯದೇಶೀಯರಲ್ಲಾಗಲಿ ಯಾರೂ ಇಂಥ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನೂ ಮಾಡದೆ ಎಲ್ಲರೂ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ನಿಮ್ಮ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನಾದರೂ ನಡಿಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |