Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:3 - ಪರಿಶುದ್ದ ಬೈಬಲ್‌

3 ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ವಾಸವಾಗಿದ್ದ ಐಗುಪ್ತದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್‍ದೇಶದ ಆಚರಣೆಗಳನ್ನೂ ನೀವು ಅನುಸರಿಸಬಾರದು; ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:3
15 ತಿಳಿವುಗಳ ಹೋಲಿಕೆ  

ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


“ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು.


“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.


ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.


ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು