ಯಾಜಕಕಾಂಡ 18:5 - ಪರಿಶುದ್ದ ಬೈಬಲ್5 ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.