ಯಾಜಕಕಾಂಡ 18:9 - ಪರಿಶುದ್ದ ಬೈಬಲ್9 “ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅಧ್ಯಾಯವನ್ನು ನೋಡಿ |