Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:10 - ಪರಿಶುದ್ದ ಬೈಬಲ್‌

10 ನಿಮ್ಮ ದ್ರಾಕ್ಷಿತೋಟಗಳಲ್ಲಿರುವ ದ್ರಾಕ್ಷಿಗಳನ್ನೆಲ್ಲಾ ತೆಗೆದುಕೊಳ್ಳಬೇಡಿರಿ: ನೆಲದ ಮೇಲೆ ಬೀಳುವ ದ್ರಾಕ್ಷಿಹಣ್ಣುಗಳನ್ನು ಹೆಕ್ಕಿಕೊಳ್ಳಬಾರದು. ಯಾಕೆಂದರೆ ನೀವು ಅವುಗಳನ್ನು ಬಡವರಿಗಾಗಿಯೂ ನಿಮ್ಮ ದೇಶದಲ್ಲಿ ವಾಸಿಸಲು ಬಂದ ಪರದೇಶಸ್ಥರಿಗಾಗಿಯೂ ಬಿಡಬೇಕು. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:10
16 ತಿಳಿವುಗಳ ಹೋಲಿಕೆ  

ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.


“ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.


“ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟುಬಿಡುವರು.


“ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; ರಾತ್ರಿಯಲ್ಲಿ ಕಳ್ಳರು ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ.


ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?


“ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.


“ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


“ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಾಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!”


“ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.


ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು.


ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು