Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:13 - ಪರಿಶುದ್ದ ಬೈಬಲ್‌

13 “ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:13
29 ತಿಳಿವುಗಳ ಹೋಲಿಕೆ  

ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.


ಮೋಸದ ತಕ್ಕಡಿಗಳೂ ಮೋಸದ ಅಳತೆಮಾಪಕಗಳೂ ಯೆಹೋವನಿಗೆ ಅಸಹ್ಯ.


ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


ಆದರೆ ಅದರ ಮಾಲೀಕನು ಪಶುವಿನೊಂದಿಗೆ ಅಲ್ಲಿದ್ದರೆ ಆಗ ನೆರೆಯವನು ಈಡುಕೊಡಬೇಕಾಗಿಲ್ಲ. ನೆರೆಯವನು ಪಶುವನ್ನು ಬಾಡಿಗೆಗೆ ತೆಗೆದುಕೊಂಡಿರುವಾಗ ಆ ಪಶು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅವನು ಈಡುಕೊಡಬೇಕಾಗಿಲ್ಲ. ಆ ಪಶುವನ್ನು ಉಪಯೋಗಿಸಲು ಅವನು ಕೊಟ್ಟ ಬಾಡಿಗೆಯೇ ಸಾಕು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ.


ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,


ಕ್ರೂರಪ್ರಾಣಿಗಳು ಆ ಪಶುವನ್ನು ಕೊಂದುಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲೀಕನಿಗೆ ಸತ್ತ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.


“ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.


ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.


“ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಆ ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು.


‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.


ನಿನ್ನ ನೆರೆಯವನಿಗೆ ಕೊಡತಕ್ಕದ್ದು ನಿನ್ನಲ್ಲಿರುವಾಗ, “ನಾಳೆ ಬಾ, ಕೊಡುತ್ತೇನೆ” ಎಂದು ಹೇಳಬೇಡ.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


“ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.


ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!


ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು