15 “ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.
ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.