ಯಾಜಕಕಾಂಡ 19:18 - ಪರಿಶುದ್ದ ಬೈಬಲ್18 ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.