ಯಾಜಕಕಾಂಡ 19:25 - ಪರಿಶುದ್ದ ಬೈಬಲ್25 ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಐದನೆಯ ವರುಷದಲ್ಲಿ ಅದರಿಂದುಂಟಾಗುವ ಆದಾಯವು ನಿಮ್ಮದೇ ಆಗಿರುವದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |