Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:26 - ಪರಿಶುದ್ದ ಬೈಬಲ್‌

26 “ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:26
22 ತಿಳಿವುಗಳ ಹೋಲಿಕೆ  

ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.


“ನೀವು ಎಲ್ಲಿಯೇ ವಾಸಿಸಿದರೂ, ಯಾವುದೇ ಪಕ್ಷಿಯ ಅಥವಾ ಯಾವುದೇ ಪ್ರಾಣಿಯ ರಕ್ತವನ್ನು ನೀವು ಎಂದಿಗೂ ತಿನ್ನಬಾರದು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಆಗ ರಾಜನು ತನ್ನ ವಿಧ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.


ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು.


ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು